ಧೂಪವೇದಿಕೆ
1 "ನೀನು ಜಾಲಿ ಮರದ ಕಟ್ಟಿಗೆಯಿಂದ ಧೂಪವೇದಿಯನ್ನು ಮಾಡಬೇಕು. 6 ಅದನ್ನು ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾಸನದ ಮುಂದೆಯೂ ಇಡಬೇಕು.
7 "ಅದರ ಮೇಲೆ ಆರೋನನು ಪರಿಮಳ ಧೂಪವನ್ನು ಸುಡಬೇಕು. ಪ್ರತಿದಿನ ಬೆಳಿಗ್ಗೆ ಸುಡಬೇಕು. ಪ್ರತಿದಿನ ಬೆಳಿಗ್ಗೆ ದೀಪಗಳನ್ನು ಸಿದ್ಧಮಾಡುವಾಗ ಅದನ್ನು ಸುಡಬೇಕು. 8 ಆರೋನನು ಸಂಜೆ ದೀಪಗಳನ್ನು ಹಚ್ಚುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಯೆಹೋವ ದೇವರ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪವು. 10 ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೆ ಒಂದು ಸಾರಿ ಪಾಪ ಪರಿಹಾರದ ಬಲಿಯ ರಕ್ತದಿಂದ ಅದರ ಕೊಂಬುಗಳಿಗೆ ಹಚ್ಚಿ ಪ್ರಾಯಶ್ಚಿತ್ತ ಮಾಡಬೇಕು. ಅದು ಯೆಹೋವ ದೇವರಿಗೆ ಮಹಾಪರಿಶುದ್ಧವಾದದ್ದು."