ತೊಳೆಯುವುದಕ್ಕೆ ಬೋಗುಣಿ
17 ಯೆಹೋವ ದೇವರು ಮೋಶೆಗೆ, 18 "ತೊಳೆದುಕೊಳ್ಳುವದಕ್ಕಾಗಿ ಕಂಚಿನ ಬೋಗುಣಿಯನ್ನು ಮಾಡಿಸಿ ಅದಕ್ಕೆ ಕಂಚಿನ ಪೀಠವನ್ನೂ ಮಾಡಿಸಿ, ಅದನ್ನು ದೇವದರ್ಶನದ ಗುಡಾರ ಮತ್ತು ಬಲಿಪೀಠದ ಮಧ್ಯದಲ್ಲಿಟ್ಟು, ಅದರಲ್ಲಿ ನೀರನ್ನು ತುಂಬಿಸಿಡಬೇಕು. 19 ಏಕೆಂದರೆ ಆರೋನನೂ ಅವನ ಪುತ್ರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು. 20 ಅವರು ದೇವದರ್ಶನದ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆ ಮಾಡುವುದಕ್ಕೂ, ಬೆಂಕಿಯಿಂದ ಯೆಹೋವ ದೇವರಿಗೆ ದಹನಬಲಿಯನ್ನು ಅರ್ಪಿಸುವುದಕ್ಕೂ ಬಲಿಪೀಠದ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದುಕೊಳ್ಳಬೇಕು. 21 ಅವರು ಸಾಯದ ಹಾಗೆ ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು," ಎಂದರು.