ಬೆಚಲಯೇಲ್ ಹಾಗೂ ಒಹೊಲಿಯಾಬ
1 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಅವನಿಗೆ, 2 "ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲಯೇಲ್ ಎಂಬವನನ್ನು ಗುರುತಿಸಿ ನಾನು ಆರಿಸಿಕೊಂಡಿದ್ದೇನೆ. 3 ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕದಿಂದಲೂ ಎಲ್ಲಾ ವಿಧವಾದ ಕೌಶಲ್ಯದಿಂದಲೂ ತುಂಬಿಸಿದ್ದೇನೆ. 4 ಅವನು ಚಿನ್ನ, ಬೆಳ್ಳಿ, ಕಂಚಿನಲ್ಲಿ ಕಲಾತ್ಮಕವಾದ ವಿನ್ಯಾಸಗಳ ಕೆಲಸವನ್ನು ಮಾಡುವುದಕ್ಕೂ, 5 ರತ್ನಗಳಲ್ಲಿ ಕೆತ್ತನೆಯನ್ನೂ ಮರದಲ್ಲಿ ಕೆತ್ತನೆಯನ್ನೂ ಸಕಲ ವಿಧವಾದ ಕೌಶಲ್ಯದ ಕೆಲಸವನ್ನು ಬಲ್ಲವನಾಗಿರುವನು. 6 ಇಗೋ, ನಾನೇ ಅವನೊಂದಿಗೆ ದಾನನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನನ್ನು ನೇಮಿಸಿದ್ದೇನೆ.
"ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವುದಕ್ಕೆ ಜಾಣರಾದವರೆಲ್ಲರ ಹೃದಯಗಳಲ್ಲಿ ಯಾವ ಕೆಲಸವನ್ನಾದರೂ ಕಲ್ಪಿಸಿ ಮಾಡುವದಕ್ಕೆ ಜ್ಞಾನವನ್ನು ಅನುಗ್ರಹಿಸಿದ್ದೇನೆ.