11 ಅದಕ್ಕೆ ಮೋಶೆ, ತನ್ನ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನೆಂದರೆ, "ಯೆಹೋವ ದೇವರೇ, ನೀವು ಮಹಾಶಕ್ತಿಯಿಂದಲೂ, ಬಲವುಳ್ಳ ಕೈಯಿಂದಲೂ ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ ನಿಮ್ಮ ಜನರ ಮೇಲೆ ಏಕೆ ನಿಮ್ಮ ಕೋಪವು ಉರಿಯುವುದು? 12 ‘ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಸಾಯಿಸಿ, ಭೂಮಿಯ ಮೇಲಿನಿಂದ ಅವರನ್ನು ಅಳಿಸಿಬಿಡುವುದಕ್ಕೂ, ದೇವರು ಅವರನ್ನು ಹೊರಗೆ ಬರಮಾಡಿದ್ದಾರೆ,’ ಎಂದು ಈಜಿಪ್ಟಿನವರು ಏಕೆ ಹೇಳಬೇಕು? ತಾವು ಕೋಪಾಗ್ನಿಯನ್ನು ಬಿಟ್ಟು ತಿರುಗಿಕೊಳ್ಳಿ. ನಿಮ್ಮ ಜನರಿಗೆ ವಿರೋಧವಾದ ಈ ಕೇಡಿನ ವಿಷಯದಲ್ಲಿ ತಮ್ಮ ಮನಸ್ಸನ್ನು ಬದಲಾಯಿಸಿರಿ. 13 ಆ ನಿಮ್ಮ ಸೇವಕರಾದ ಅಬ್ರಹಾಮನನ್ನೂ, ಇಸಾಕನನ್ನೂ, ಇಸ್ರಾಯೇಲನನ್ನೂ ಜ್ಞಾಪಕಮಾಡಿಕೊಳ್ಳಿರಿ, ಯಾರಿಗೆ ನೀವು ಆಣೆಯಿಟ್ಟು ಪ್ರಮಾಣಮಾಡಿ: ‘ಆಕಾಶದ ನಕ್ಷತ್ರಗಳ ಹಾಗೆ ನಿನ್ನ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯವರಿಗೆ ಕೊಡುವೆನು ಮತ್ತು ಅವರು ನಿತ್ಯವಾಗಿ ಸ್ವಾಧೀನವಾಗಿಟ್ಟುಕೊಳ್ಳುವರು’ ಎಂದು ಮಾತುಕೊಡಲಿಲ್ಲವೆ?" ಎಂದನು. 14 ಆಗ ಯೆಹೋವ ದೇವರು ತಮ್ಮ ಜನರಿಗೆ ಮಾಡುವೆನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಮಾರ್ಪಡಿಸಿಕೊಂಡರು.
Publicidade
ವಿಮೋಚನಕಾಂಡ 32
Estes versículos te tocaram? Ore agora!
+581 estão orando agora.
Junte-se à corrente de oração.