5 ಮೋಶೆಯ ಸಂಗಡ ಮಾತನಾಡಿ, "ಯೆಹೋವ ದೇವರು ಮಾಡಬೇಕೆಂದು ಆಜ್ಞಾಪಿಸಿದ ಸೇವೆಯ ಕೆಲಸಕ್ಕೆ ಬೇಕಾಗಿರುವುದಕ್ಕಿಂತ ಹೆಚ್ಚಾಗಿ ಕಾಣಿಕೆಗಳನ್ನು ಈ ಜನರು ತರುತ್ತಿದ್ದಾರೆ," ಎಂದು ಹೇಳಿದರು.
6 ಆಗ ಮೋಶೆಯು, "ಇನ್ನು ಮೇಲೆ ಪರಿಶುದ್ಧಸ್ಥಳದ ಕಾಣಿಕೆಗೋಸ್ಕರ ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಕೆಲಸ ಮಾಡಬಾರದೆಂದು ಪಾಳೆಯದಲ್ಲೆಲ್ಲಾ ಪ್ರಕಟಿಸಬೇಕು," ಎಂದು ಆಜ್ಞಾಪಿಸಿದನು. ಹೀಗೆ ಜನರು ಕಾಣಿಕೆಗಳನ್ನು ತರುವುದನ್ನು ನಿಲ್ಲಿಸಿಬಿಟ್ಟರು. 7 ಏಕೆಂದರೆ ಎಲ್ಲಾ ಕೆಲಸವನ್ನು ಮಾಡುವುದಕ್ಕೆ ಸಾಕಾಗಿ ಮಿಕ್ಕುವಷ್ಟು ಸಾಮಗ್ರಿಗಳು ದೊರೆತವು.