20 ಅವನು ಆಜ್ಞಾಶಾಸನಗಳನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿಟ್ಟು, ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ, ಮಂಜೂಷದ ಮೇಲೆ ಕರುಣಾಸನವನ್ನು ಇಟ್ಟನು. 21 ಅವನು ಮಂಜೂಷವನ್ನು ಗುಡಾರಕ್ಕೆ ತಂದು, ಮರೆಮಾಡುವ ಪರದೆಯನ್ನಿರಿಸಿ, ಒಡಂಬಡಿಕೆಯ ಮಂಜೂಷವನ್ನು ಮರೆಮಾಡಿದನು. ಯೆಹೋವ ದೇವರು ಆಜ್ಞಾಪಿಸಿದ ಹಾಗೆಯೇ ಮೋಶೆಯು ಮಾಡಿದನು.
Publicidade