ಪೌಲನ ಸೆರೆಯು ಸುವಾರ್ತೆಯ ಪ್ರಗತಿಯು
12 ಪ್ರಿಯರೇ, ನನಗೆ ಸಂಭವಿಸಿದ ಸಂಕಟಗಳು ಸುವಾರ್ತೆಯ ಪ್ರಗತಿಗಾಗಿಯೇ ಅನುಕೂಲವಾಯಿತು ಎಂಬುದನ್ನು ನೀವು ತಿಳಿಯಬೇಕೆಂದು ನಾನು ಅಪೇಕ್ಷಿಸುತ್ತೇನೆ. 13 ಹೇಗೆಂದರೆ, ನಾನು ಸೆರೆಯಲ್ಲಿರುವುದು ಕ್ರಿಸ್ತನ ನಿಮಿತ್ತವೇ ಎಂದು ಇಡೀ ರಾಜಭವನದಲ್ಲಿಯೂ ಮಿಕ್ಕಾದವರೆಲ್ಲರಿಗೂ ಚೆನ್ನಾಗಿ ತಿಳಿದಿದೆ. 14 ನಾನು ಸೆರೆಯಲ್ಲಿರುವುದರಿಂದಲೇ ಕರ್ತ ದೇವರಲ್ಲಿರುವ ಅನೇಕ ಸಹೋದರರು ಭಯವಿಲ್ಲದೆಯೂ ಭರವಸೆಯಿಂದಲೂ ಸುವಾರ್ತೆಯ ವಾಕ್ಯವನ್ನು ಮಾತನಾಡುವುದಕ್ಕೆ ಪ್ರೋತ್ಸಾಹ ಹೊಂದಿದ್ದಾರೆ.
20 ಹೇಗೆಂದರೆ, ನಾನು ಯಾವ ವಿಷಯದಲ್ಲೂ ನಾಚಿಕೆಪಡದೆ ಎಂದಿನಂತೆ ಈಗಲೂ ಪೂರ್ಣ ಧೈರ್ಯದಿಂದಿರುವಂತೆಯೇ ಬದುಕಿದರೂ ಸತ್ತರೂ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂಬುದೇ ನನ್ನ ಬಯಕೆಯೂ ನಿರೀಕ್ಷೆಯೂ ಆಗಿದೆ. 21 ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ,