6 ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ. 7 ಆಗ ಎಲ್ಲಾ ಗ್ರಹಿಕೆಯನ್ನೂ ಮೀರುವ ದೇವರ ಸಮಾಧಾನವು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವುದು.
8 ಕಡೆಯದಾಗಿ ಪ್ರಿಯರೇ, ಯಾವುದು ಸತ್ಯವೂ ಯಾವುದು ಮಾನ್ಯವೂ ಯಾವುದು ನ್ಯಾಯವೂ ಯಾವುದು ಶುದ್ಧವೂ ಯಾವುದು ಪ್ರೀತಿಕರವೂ ಯಾವುದು ಮನೋಹರವೂ ಯಾವುದು ಉತ್ತಮವಾದದ್ದೋ ಯಾವುದು ಕೀರ್ತಿಗೆ ಯೋಗ್ಯವೋ ಅವೆಲ್ಲವುಗಳನ್ನೇ ಆಲೋಚಿಸಿರಿ. 9 ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿದ್ದೀರೋ ಅದನ್ನೇ ಮಾಡುವವರಾಗಿರಿ. ಆಗ ಸಮಾಧಾನದ ದೇವರು ನಿಮ್ಮೊಂದಿಗಿರುವರು.