6 ಈ ರೀತಿಯಾಗಿ, "ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅದು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು."3:6 ಆದಿ 15:6
7 ಆದ್ದರಿಂದ ನಂಬುವವರೇ, ಅಬ್ರಹಾಮನ ಮಕ್ಕಳೆಂದು ನೀವು ಅರ್ಥಮಾಡಿಕೊಳ್ಳಿರಿ. 8 ಯೆಹೂದ್ಯರಲ್ಲದವರನ್ನು ನಂಬಿಕೆಯಿಂದಲೇ ದೇವರು ನೀತಿವಂತರನ್ನಾಗಿ ಮಾಡುವರು ಎಂದು ಪವಿತ್ರ ವೇದವು ಮೊದಲೇ ಕಂಡು, "ನಿನ್ನ ಮೂಲಕ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,"3:8 ಆದಿ 12:3; 18:18; 22:18 ಎಂಬ ಸುವಾರ್ತೆಯನ್ನು ಅಬ್ರಹಾಮನಿಗೆ, ಮುಂಚಿತವಾಗಿಯೇ ಸಾರಿತು. 9 ಆದ್ದರಿಂದ, ದೇವರನ್ನು ನಂಬುವ ಎಲ್ಲರೂ ಅಬ್ರಹಾಮನು ಆಶೀರ್ವಾದ ಹೊಂದಿದ ಹಾಗೆಯೇ ಆಶೀರ್ವಾದ ಹೊಂದುವರು.