ಹಾಗರ್ ಮತ್ತು ಸಾರಳು
21 ಮೋಶೆಯ ನಿಯಮದ ಕೆಳಗಿರಲು ಬಯಸುವವರೇ, ನಿಯಮವು ಏನು ಹೇಳುತ್ತದೆಯೆಂದು ನೀವು ಸ್ಪಷ್ಟವಾಗಿ ಅರ್ಥಮಾಡಿಕೊಂಡಿದ್ದೀರಾ? ನನಗೆ ಹೇಳಿರಿ. 22 ಏಕೆಂದರೆ ದಾಸಿಯಿಂದ ಒಬ್ಬನು, ಧರ್ಮಪತ್ನಿಯಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಪವಿತ್ರ ವೇದದಲ್ಲಿ ಬರೆದಿದೆ. 23 ದಾಸಿಯ ಮಗನು ಶಾರೀರಿಕವಾಗಿ ಹುಟ್ಟಿದವನು. ಆದರೆ ಧರ್ಮಪತ್ನಿಯ ಮಗನಾದರೋ ದೇವರ ವಾಗ್ದಾನದ ಮೂಲಕ ಹುಟ್ಟಿದನು.
24 ಈ ಸಂಗತಿಗಳು ಉಪಮಾನವಾಗಿವೆ. ಹೇಗೆಂದರೆ, ಇವರು ಎರಡು ಒಡಂಬಡಿಕೆಗಳೇ. ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು. ಅದೇ ಹಾಗರ್. 25 ಹಾಗರ್ ಅರೇಬಿಯಾದಲ್ಲಿರುವ ಸೀನಾಯಿ ಪರ್ವತ. ಅದು ಈಗಿನ ಯೆರೂಸಲೇಮಿಗೆ ಸರಿಹೊಂದುತ್ತಾಳೆ. ಏಕೆಂದರೆ ಆಕೆಯು ಈಗಲೂ ತನ್ನ ಮಕ್ಕಳ ಸಹಿತ ದಾಸ್ಯದಲ್ಲಿದ್ದಾಳೆ. 26 ಆದರೆ ಸ್ವರ್ಗೀಯ ಯೆರೂಸಲೇಮ್ ಸ್ವತಂತ್ರಳು. ಈಕೆಯೇ ನಮ್ಮ ತಾಯಿ.