4 ಆದರೆ ನಿಯಮಿತ ಕಾಲವು ಪರಿಪೂರ್ಣವಾದಾಗ, ದೇವರು ತಮ್ಮ ಮಗನನ್ನು ಸ್ತ್ರೀಯಿಂದ ಹುಟ್ಟಿದವನಾಗಿಯೂ ನಿಯಮಕ್ಕೆ ಒಳಗಾದವನನ್ನಾಗಿಯೂ ಕಳುಹಿಸಿಕೊಟ್ಟರು. 5 ಹೀಗೆ ದೇವರು ನಿಯಮಕ್ಕೆ ಒಳಗಾದ ನಮ್ಮನ್ನು ವಿಮೋಚಿಸಿ, ನಾವು ಪುತ್ರರ ಸ್ಥಾನವನ್ನು ಹೊಂದುವಂತೆ ಮಾಡಿದರು. 6 ನೀವು ದೇವರ ಪುತ್ರರಾಗಿರುವುದರಿಂದ, ದೇವರು ತಮ್ಮ ಪುತ್ರ ಆಗಿರುವವರ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿ, "ಅಪ್ಪಾ ತಂದೆಯೇ!" ಎಂದು ಕರೆಯುವಂತೆ ಮಾಡಿದ್ದಾರೆ.