14 ತನ್ನ ಸಹೋದರನ ಮಗನು ಸೆರೆಯಾಗಿ ಹೋಗಿರುವುದನ್ನು ಕೇಳಿದಾಗ, ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ, ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ, ದಾನಿನವರೆಗೆ ಹಿಂದಟ್ಟಿದನು. 15 ಅಬ್ರಾಮನು ರಾತ್ರಿಯಲ್ಲಿ ಅವರಿಗೆ ವಿರೋಧವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ, ಅವರನ್ನು ಹೊಡೆದು, ದಮಸ್ಕದ ಉತ್ತರದಲ್ಲಿ ಹೋಬಾದವರೆಗೆ ಅವರನ್ನು ಸೋಲಿಸಿದನು. 16 ಆಸ್ತಿಯನ್ನೆಲ್ಲಾ ಹಿಂದಕ್ಕೆ ತೆಗೆದುಕೊಂಡು ಬಂದನು. ತನ್ನ ಬಂಧುವಾದ ಲೋಟನನ್ನೂ, ಅವನ ಸಂಪತ್ತನ್ನೂ ಸ್ತ್ರೀಯರನ್ನೂ ಜನರನ್ನೂ ಹಿಂದಕ್ಕೆ ತೆಗೆದುಕೊಂಡು ಬಂದನು.
18 ಸಾಲೇಮಿನ ಅರಸ ಮೆಲ್ಕಿಜೆದೇಕನು ರೊಟ್ಟಿ ಮತ್ತು ದ್ರಾಕ್ಷಾರಸವನ್ನು ತಂದನು. ಇವನು ಮಹೋನ್ನತರಾದ ದೇವರ ಯಾಜಕನೂ ಆಗಿದ್ದನು. 19 ಇವನು ಅಬ್ರಾಮನನ್ನು ಹೀಗೆ ಆಶೀರ್ವದಿಸಿದನು:
"ಅಬ್ರಾಮನು ಭೂಮಿ, ಆಕಾಶವನ್ನು ಸೃಷ್ಟಿಸಿದ
ಮಹೋನ್ನತ ದೇವರಿಂದ ಆಶೀರ್ವಾದ ಹೊಂದಲಿ.
20 ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ
ಮಹೋನ್ನತ ದೇವರು ಸ್ತುತಿಹೊಂದಲಿ."
ಅಬ್ರಾಮನು ಎಲ್ಲವುಗಳಲ್ಲಿ ಅವನಿಗೆ ಹತ್ತನೆಯ ಒಂದು ಭಾಗವನ್ನು ಕೊಟ್ಟನು.