Pular para o conteúdo
Publicidade

ಆದಿಕಾಂಡ 2:18-25

18 ಅನಂತರ ಯೆಹೋವ ದೇವರು, "ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಬೀಳುವ ಸಹಕಾರಿಣಿಯನ್ನು ಉಂಟುಮಾಡುವೆನು," ಎಂದರು.

19 ಯೆಹೋವ ದೇವರು ಭೂಮಿಯಲ್ಲಿರುವ ಎಲ್ಲಾ ಕಾಡುಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿದ ಮೇಲೆ, ಅವುಗಳಿಗೆ ಮನುಷ್ಯನು ಏನು ಹೆಸರಿಡುವನೋ ಎಂದು ನೋಡುವುದಕ್ಕೆ, ಅವುಗಳನ್ನು ಅವನ ಬಳಿಗೆ ತಂದರು. ಒಂದೊಂದು ಜೀವಿಗೂ ಮನುಷ್ಯನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು. 20 ಹೀಗೆ ಮನುಷ್ಯನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಹೆಸರಿಟ್ಟನು.

ಆದರೆ ಆದಾಮನಿಗೆ2:20 ಆದಾಮ ಅಂದರೆ ಮನುಷ್ಯ ಸರಿಬೀಳುವ ಸಹಕಾರಿಣಿಯು ಕಾಣಿಸಲಿಲ್ಲ. 21 ಆದಕಾರಣ ಯೆಹೋವ ದೇವರು ಮನುಷ್ಯನಿಗೆ ಗಾಢನಿದ್ರೆ ಬರಮಾಡಿದರು. ಅವನು ನಿದ್ರಿಸುತ್ತಿರುವಾಗ, ಅವರು ಅವನ ಪಕ್ಕೆಯನ್ನು ತೆಗೆದುಕೊಂಡು, ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು. 22 ಬಳಿಕ ಯೆಹೋವ ದೇವರು ಮನುಷ್ಯನಿಂದ ತೆಗೆದಿದ್ದ ಪಕ್ಕೆಯಿಂದ ಒಬ್ಬ ಸ್ತ್ರೀಯನ್ನು ಉಂಟುಮಾಡಿ, ಆಕೆಯನ್ನು ಆ ಮನುಷ್ಯನ ಬಳಿಗೆ ತಂದರು.

23 ಆಗ ಮನುಷ್ಯನು ಹೀಗೆ ಹೇಳಿದನು:

"ಇದು ನನ್ನ ಎಲುಬಿನಿಂದಾದ ಎಲುಬು

ಮತ್ತು ನನ್ನ ಮಾಂಸದಿಂದಾದ ಮಾಂಸವಾಗಿದೆ.

ಈಕೆ ನರನಿಂದ ತೆಗೆದಿರುವುದರಿಂದ,

ಈಕೆ, ‘ನಾರಿ’ ಎಂದು ಎನಿಸಿಕೊಳ್ಳುವಳು."

24 ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗಿರುವರು.

25 ಆದಾಮನೂ ಅವನ ಹೆಂಡತಿಯೂ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.

Estes versículos te tocaram? Ore agora!

+581 estão orando agora.

Junte-se à corrente de oração.