17 ಅನಂತರ ದೇವರು ಆದಾಮನಿಗೆ ಹೀಗೆ ಹೇಳಿದರು, "ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ,
"ನಿನ್ನ ನಿಮಿತ್ತ ಭೂಮಿಗೆ ಶಾಪ ಬಂತು.
ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ದುಡಿದು,
ಅದರ ಹುಟ್ಟುವಳಿಯನ್ನು ಉಣ್ಣುವೆ.
18 ಭೂಮಿಯಲ್ಲಿ ಮುಳ್ಳುಗಿಡಗಳೂ ಕಳ್ಳಿಗಳೂ ಬೆಳೆಯುವುವು.
ನೀನು ಹೊಲದ ಬೆಳೆಯನ್ನು ಉಣ್ಣುವೆ.
19 ನೀನು ಪುನಃ ಮಣ್ಣಿಗೆ ಸೇರುವ ತನಕ,
ಬೆವರಿಡುತ್ತಾ ಆಹಾರವನ್ನು ಉಣ್ಣುವೆ.
ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ.
ನೀನು ಪುನಃ ಮಣ್ಣಿಗೆ ಸೇರತಕ್ಕವನು."