23 ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು:
"ಆದಾ, ಚಿಲ್ಲಾ, ನನ್ನ ಮಾತನ್ನು ಕೇಳಿರಿ.
ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ.
ನನಗೆ ಗಾಯಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು.
ನನ್ನನ್ನು ಹೊಡೆದ ಯುವಕನನ್ನು ಹತ ಮಾಡಿದೆನು.
24 ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತೀಕಾರವಾದರೆ,
ಲೆಮೆಕನನ್ನು ಹೊಡೆಯುವವನಿಗೆ, ಎಪ್ಪತ್ತೇಳರಷ್ಟಾಗುವುದು."