15 ಆಗ ಫರೋಹನು ಯೋಸೇಫನಿಗೆ, "ನಾನು ಕನಸನ್ನು ಕಂಡಿದ್ದೇನೆ, ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ, ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ," ಎಂದನು.
16 ಯೋಸೇಫನು ಫರೋಹನಿಗೆ ಉತ್ತರವಾಗಿ, "ಅದನ್ನು ನಾನು ಹೇಳಲಾರೆ, ಆದರೆ ದೇವರು ಫರೋಹನಿಗೆ ಮೆಚ್ಚಿಕೆಯಾದ ಉತ್ತರವನ್ನು ಕೊಡುವರು," ಎಂದನು.