ಯೋಸೇಫನು ತನ್ನನ್ನು ಗುರುತಿಸಿಕೊಂಡದ್ದು
1 ಆಗ ಯೋಸೇಫನು ತನ್ನ ಸುತ್ತಲೂ ನಿಂತಿದ್ದವರ ಮುಂದೆ ಮನಸ್ಸನ್ನು ಬಿಗಿಹಿಡಿದುಕೊಳ್ಳಲು ಆಗಲಿಲ್ಲ. "ಎಲ್ಲರನ್ನೂ ತನ್ನ ಬಳಿಯಿಂದ ಹೊರಗೆ ಹೋಗುವಂತೆ ಮಾಡಿರಿ," ಎಂದು ಕೂಗಿದನು. ಯೋಸೇಫನು ತನ್ನ ಸಹೋದರರಿಗೆ ತನ್ನನ್ನು ಪರಿಚಯಿಸಿಕೊಳ್ಳಲು ಹೋದಾಗ, ಅಲ್ಲಿ ಬೇರೆ ಯಾರೂ ಇರಲಿಲ್ಲ.
4 ಆಗ ಯೋಸೇಫನು ತನ್ನ ಸಹೋದರರಿಗೆ, "ನನ್ನ ಬಳಿಗೆ ಬನ್ನಿರಿ," ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು, "ನೀವು ಈಜಿಪ್ಟಿಗೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ! 5 ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟುಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾರೆ.
15 ಇದಲ್ಲದೆ ತನ್ನ ಸಹೋದರರಿಗೆಲ್ಲಾ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.