13 ಆಗ ದೇವರು ನೋಹನಿಗೆ, "ನಾನು ಮನುಷ್ಯರೆಲ್ಲರಿಗೂ ಅಂತ್ಯವನ್ನು ತೀರ್ಮಾನಿಸಿದ್ದೇನೆ. ಅವರಿಂದ ಭೂಮಿಯು ಹಿಂಸಾಚಾರದಿಂದ ತುಂಬಿದೆ. ನಾನು ಭೂಮಿಯೊಂದಿಗೆ ಅವರನ್ನೂ ನಾಶಮಾಡುವೆನು. 14 ಆದ್ದರಿಂದ ನಿನಗೋಸ್ಕರವಾಗಿ ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ಕೋಣೆಗಳನ್ನು ಮಾಡು, ಅದರ ಒಳಭಾಗಕ್ಕೂ ಹೊರಭಾಗಕ್ಕೂ ರಾಳವನ್ನು ಹಚ್ಚು. 15 ನೀನು ಅದನ್ನು ಈ ರೀತಿಯಾಗಿ ಮಾಡತಕ್ಕದ್ದು: ನಾವೆಯ ಉದ್ದವು ಸುಮಾರು ಒಂದುನೂರ ಮೂವತ್ತೈದು ಮೀಟರ್, ಅದರ ಅಗಲ ಇಪ್ಪತ್ತಮೂರು ಮೀಟರ್, ಅದರ ಎತ್ತರ ಹದಿನಾಲ್ಕು ಮೀಟರ್ ಇರಬೇಕು.6:15 ಅಂದರೆ, ಸುಮಾರು ಉದ್ದ ಮುನ್ನೂರು ಮೊಳ, ಅಗಲ ಐವತ್ತು ಮೊಳ, ಎತ್ತರ ಮೂವತ್ತು ಮೊಳ 16 ಅದಕ್ಕೆ ಚಾವಣಿಯನ್ನು ಮಾಡು, ಅದರ ಕೆಳಗೆ ಹದಿನೆಂಟು ಇಂಚಿನ6:16 ಅಂದರೆ, ಸುಮಾರು ಎತ್ತರ ಒಂದು ಮೊಳ ಕಿಟಕಿಯನ್ನು ನಾವೆಯ ಸುತ್ತಲೂ ಮಾಡಬೇಕು; ಅದರ ಪಕ್ಕದಲ್ಲಿ ನಾವೆಯ ಬಾಗಿಲನ್ನು ಇಡಬೇಕು. ಕೆಳಗಿನದು, ಎರಡನೆಯದು, ಮೂರನೆಯದು ಎಂಬ ಮೂರು ಅಂತಸ್ತುಗಳನ್ನು ಮಾಡಬೇಕು.
Publicidade