7 ಆಗ ನೋಹನು ಪ್ರಳಯದ ನಿಮಿತ್ತವಾಗಿ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯಲ್ಲಿ ಸೇರಿದನು. 8 ಶುದ್ಧ ಪ್ರಾಣಿಗಳಲ್ಲಿಯೂ, ಅಶುದ್ಧ ಪ್ರಾಣಿಗಳಲ್ಲಿ, ಪಕ್ಷಿಗಳಲ್ಲಿ ಮತ್ತು ನೆಲದ ಮೇಲೆ ಹರಿದಾಡುವ ಜೀವಿಗಳೆಲ್ಲವೂ 9 ದೇವರು ನೋಹನಿಗೆ ಆಜ್ಞಾಪಿಸಿದಂತೆಯೇ ಗಂಡುಹೆಣ್ಣುಗಳು ಜೋಡಿ ಜೋಡಿಯಾಗಿ ಬಂದು ನೋಹನೊಂದಿಗೆ ನಾವೆಯಲ್ಲಿ ಸೇರಿಕೊಂಡವು. 10 ಏಳು ದಿವಸಗಳಾದ ನಂತರ ಜಲಪ್ರಳಯವು ಭೂಮಿಯ ಮೇಲೆ ಬಂತು.
Publicidade
Publicidade