15 ಆಗ ನಾನು ನನಗೂ ನಿಮಗೂ ಪ್ರತಿಯೊಂದು ಜೀವಿಗಳಿಗೂ ಮಧ್ಯೆಯಿರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಎಲ್ಲಾ ಜೀವಿಗಳನ್ನು ನಾಶಮಾಡುವ ಪ್ರಳಯವಾಗುವುದೇ ಇಲ್ಲ. 16 ಆ ಮಳೆಬಿಲ್ಲು ಮೇಘಗಳಲ್ಲಿರುವಾಗ, ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ಇರುವ ನಿತ್ಯವಾದ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುವ ಹಾಗೆ, ನಾನು ಅದನ್ನು ನೋಡುವೆನು."
Publicidade