8 ಇದಲ್ಲದೆ ದೇವರು ನೋಹನಿಗೂ ಅವನ ಸಂಗಡ ಇದ್ದ ಅವನ ಪುತ್ರರಿಗೂ ಹೇಳಿದ್ದೇನೆಂದರೆ, 9 "ನಾನು ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡವೂ ನಿಮ್ಮ ತರುವಾಯ ನಿಮ್ಮ ಸಂತತಿಯವರ ಸಂಗಡವೂ 10 ನಿಮ್ಮ ಜೊತೆ ನಾವೆಯೊಳಗಿಂದ ಹೊರಗೆ ಬಂದ ಎಲ್ಲಾ ಜೀವಿಗಳ ಸಹಿತ ಅಂದರೆ ಪಕ್ಷಿಗಳು, ಪಶುಗಳು, ಕಾಡುಮೃಗಗಳು ಮತ್ತು ಭೂಮಿಯ ಎಲ್ಲಾ ಜೀವಿಗಳೊಂದಿಗೆ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ 11 ಜಲಪ್ರಳಯದಿಂದ ಇನ್ನು ಮೇಲೆ ಎಲ್ಲಾ ಜೀವಿಗಳು ನಾಶವಾಗುವುದಿಲ್ಲ. ಭೂಮಿಯನ್ನು ಹಾಳು ಮಾಡುವುದಕ್ಕೆ ಇನ್ನು ಮುಂದೆ ಇಂಥ ಪ್ರಳಯವು ಇರುವುದಿಲ್ಲ ಎಂದು ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ."
Publicidade