7 ಶಿಸ್ತಿಗಾಗಿ ಕಷ್ಟವನ್ನು ನೀವು ಸಹಿಸಿಕೊಳ್ಳಬೇಕು. ದೇವರು ನಿಮ್ಮನ್ನು ಮಕ್ಕಳೆಂದು ನಡೆಸಿಕೊಳ್ಳುತ್ತಾರೆ. ಏಕೆಂದರೆ ತಂದೆಯಿಂದ ಶಿಸ್ತುಹೊಂದದ ಮಕ್ಕಳೆಲ್ಲಿ? 8 ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರರಾಗಿರದಿದ್ದರೆ, ನೀವು ಅಕ್ರಮವಾಗಿ ಹುಟ್ಟಿದ ಮಕ್ಕಳೇ ಹೊರತು ನಿಜ ಮಕ್ಕಳಲ್ಲ. 9 ಇದು ಮಾತ್ರವಲ್ಲದೆ, ನಮ್ಮನ್ನು ಶಿಕ್ಷಿಸಿದ ಇಹಲೋಕದ ಶಾರೀರಿಕ ತಂದೆಗಳನ್ನು ನಾವು ಸನ್ಮಾನಿಸಿದೆವಷ್ಟೆ. ಆತ್ಮಗಳಿಗೆ ತಂದೆಯಾದ ದೇವರಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ? 10 ನಮ್ಮ ತಂದೆಯಾದವರು ತಮಗೆ ಒಳ್ಳೆಯದೆಂದು ತಿಳಿದಾಗ, ಸ್ವಲ್ಪಕಾಲ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತಮ್ಮ ಪವಿತ್ರತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಒಳ್ಳೆಯದಕ್ಕಾಗಿಯೇ ಶಿಕ್ಷಿಸುತ್ತಾರೆ.
Publicidade
ಇಬ್ರಿಯರಿಗೆ 12
Estes versículos te tocaram? Ore agora!
+581 estão orando agora.
Junte-se à corrente de oração.