5 ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ,
"ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ,
ಎಂದಿಗೂ ತೊರೆಯುವುದಿಲ್ಲ!"13:5 ಧರ್ಮೋ 31:6
6 ಆದ್ದರಿಂದ,
"ಕರ್ತದೇವರು ನನ್ನ ಸಹಾಯಕರು, ನಾನು ಭಯಪಡೆನು.
ಮನುಷ್ಯನು ನನಗೆ ಏನು ಮಾಡಬಲ್ಲನು?"13:6 ಕೀರ್ತನೆ 118:6,7
ಎಂದು ನಾವು ಧೈರ್ಯವಾಗಿ ಹೇಳುವೆವು.