4 ಏಕೆಂದರೆ ಪ್ರತಿಯೊಂದು ಮನೆಯೂ ಯಾರೋ ಒಬ್ಬರಿಂದ ಕಟ್ಟಲಾಗುತ್ತದೆ. ಆದರೆ ಸಮಸ್ತವನ್ನು ಕಟ್ಟಿದವರು ದೇವರೇ. 5 "ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು."3:5 ಅರಣ್ಯ 12:7 ಅವನು, ಮುಂದೆ ಪ್ರಕಟವಾಗಬೇಕಾಗಿದ್ದ ಒಬ್ಬರಿಗೆ ಸಾಕ್ಷಿಯಾಗಿದ್ದನು. 6 ಕ್ರಿಸ್ತ ಯೇಸುವಾದರೋ ಮಗನಾಗಿ ದೇವರ ಮನೆಯ ಮೇಲೆ ನಂಬಿಗಸ್ತರಾಗಿದ್ದಾರೆ. ಆದುದರಿಂದ ನಾವು ನಮ್ಮ ಧೈರ್ಯವನ್ನೂ ನಾವು ಹೊಗಳಿಕೊಳ್ಳುವ ನಿರೀಕ್ಷೆಯನ್ನೂ ಕಡೆಯತನಕ ದೃಢವಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.