ಯಾಜಕ ಮೆಲ್ಕಿಜೆದೇಕ
1 ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತರಾದ ದೇವರ ಯಾಜಕನೂ ಆಗಿದ್ದನು. ರಾಜರನ್ನು ಸೋಲಿಸಿ, ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಸಂಧಿಸಿ ಅವನನ್ನು ಆಶೀರ್ವದಿಸಿದನು. 2 ಅಬ್ರಹಾಮನು ಎಲ್ಲವುಗಳಲ್ಲಿ ಅವನಿಗೆ ಹತ್ತರಲ್ಲಿ ಒಂದು ಭಾಗವನ್ನು ಕೊಟ್ಟನು. ಅವನ ಹೆಸರಿಗೆ ಮೊದಲನೆಯದಾಗಿ, "ನೀತಿರಾಜನು" ಎಂದೂ ತರುವಾಯ "ಸಾಲೇಮಿನ ರಾಜ," ಅಂದರೆ, "ಸಮಾಧಾನದ ಅರಸನು" ಎಂದರ್ಥ.
4 ಮೆಲ್ಕಿಜೆದೇಕನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ಮೂಲ ಪಿತೃವಾದ ಅಬ್ರಹಾಮನು ಗೆದ್ದು ತಂದವುಗಳಲ್ಲಿ ಹತ್ತರಲ್ಲಿ ಒಂದು ಭಾಗವನ್ನು ಇವನಿಗೇ ಕೊಟ್ಟನಲ್ಲಾ. 9 ಇದು ಮಾತ್ರವಲ್ಲದೆ ದಶಮಭಾಗಗಳನ್ನು ತೆಗೆದುಕೊಳ್ಳುವ ಲೇವಿಯೂ ಅಬ್ರಹಾಮನ ಮೂಲಕ ದಶಮಭಾಗಗಳನ್ನು ಕೊಟ್ಟ ಹಾಗಾಯಿತು. 10 ಹೇಗೆಂದರೆ, ಮೆಲ್ಕಿಜೆದೇಕನು ಅಬ್ರಹಾಮನನ್ನು ಸಂಧಿಸಿದಾಗ, ಲೇವಿಯು ತನ್ನ ಪಿತೃ ಆದ ಅಬ್ರಹಾಮನ ದೇಹದಲ್ಲಿ ಇದ್ದನು ಎಂದು ಪರಿಗಣಿಸಬಹುದು.