Pular para o conteúdo
Publicidade

ಯೆಶಾಯ 4

1 ಆ ದಿವಸದಲ್ಲಿ ಏಳುಮಂದಿ ಹೆಂಗಸರು

ಒಬ್ಬ ಮನುಷ್ಯನನ್ನು ಹಿಡಿದು,

"ನಾವು ಸ್ವಂತವಾಗಿ ದುಡಿದು ಉಣ್ಣುವೆವು,

ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು,

ನಮ್ಮ ನಿಂದೆಯನ್ನು ನೀಗಿಸುವುದಕ್ಕೆ

ನಿನ್ನ ಹೆಸರು ನಮಗಿದ್ದರೆ ಸಾಕು,"

ಎಂದು ಕೇಳಿಕೊಳ್ಳುವರು.

ಯೆಹೋವ ದೇವರ ಕೊಂಬೆ

2 ಆ ದಿನದಲ್ಲಿ ಯೆಹೋವ ದೇವರ ಕೊಂಬೆಯು ಸುಂದರವಾಗಿಯೂ, ಮಹಿಮೆಯುಳ್ಳದ್ದಾಗಿಯೂ ಇರುವುದು. ಭೂಮಿಯ ಫಲವು ಇಸ್ರಾಯೇಲರಲ್ಲಿ ಉಳಿದವರಿಗೆ ಅಭಿಮಾನವೂ, ರಮ್ಯವಾಗಿಯೂ ಇರುವುದು. 3 ಹೀಗಿರುವಲ್ಲಿ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಹಾಗೂ ಯೆರೂಸಲೇಮಿನಲ್ಲಿ ವಾಸಿಸುವವರೆಂದೂ ದಾಖಲೆಗೊಂಡ ಪ್ರತಿಯೊಬ್ಬರೂ ಪವಿತ್ರರು ಎಂದು ಕರೆಯಲಾಗುವರು. 4 ಯೆಹೋವ ದೇವರು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಪುತ್ರಿಯರ ಕಲ್ಮಷವನ್ನು ತೊಳೆದು, ಯೆರೂಸಲೇಮಿನ ಮೇಲಿನ ರಕ್ತದ ಕಲೆಗಳನ್ನು ತೆಗೆದುಹಾಕುವರು. 5 ಆಗ ಯೆಹೋವ ದೇವರು ಚೀಯೋನ್ ಪರ್ವತದ ಪ್ರತಿಯೊಂದು ನಿವಾಸದ ಮೇಲೂ, ಅದರ ಸಭೆಗಳ ಮೇಲೂ, ಹಗಲಿನಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಿನಲ್ಲಿ ಪ್ರಜ್ವಲಿಸುವ ಅಗ್ನಿಪ್ರಕಾಶವನ್ನು ಉಂಟುಮಾಡುವರು. ಏಕೆಂದರೆ ದೇವರ ಮಹಿಮೆ ಎಲ್ಲದರ ಮೇಲೆ ಚಪ್ಪರದಂತೆಯೂ ಆವರಿಸುವುದು. 6 ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ, ಬಿರುಗಾಳಿಗೂ, ಮಳೆಗೂ ಆಶ್ರಯವನ್ನು ಕೊಡುವ ಮಂಟಪವಾಗಿ ಇರುವುದು.

Todos os capítulos de ಯೆಶಾಯ 66
  1. 1
  2. 2
  3. 3
  4. 4
  5. 5
  6. 6
  7. 7
  8. 8
  9. 9
  10. 10
  11. 11
  12. 12
  13. 13
  14. 14
  15. 15
  16. 16
  17. 17
  18. 18
  19. 19
  20. 20
  21. 21
  22. 22
  23. 23
  24. 24
  25. 25
  26. 26
  27. 27
  28. 28
  29. 29
  30. 30
  31. 31
  32. 32
  33. 33
  34. 34
  35. 35
  36. 36
  37. 37
  38. 38
  39. 39
  40. 40
  41. 41
  42. 42
  43. 43
  44. 44
  45. 45
  46. 46
  47. 47
  48. 48
  49. 49
  50. 50
  51. 51
  52. 52
  53. 53
  54. 54
  55. 55
  56. 56
  57. 57
  58. 58
  59. 59
  60. 60
  61. 61
  62. 62
  63. 63
  64. 64
  65. 65
  66. 66

Estes versículos te tocaram? Ore agora!

+581 estão orando agora.

Junte-se à corrente de oração.