Pular para o conteúdo
Publicidade

ಯೆಶಾಯ 43:1,2

OKCV Kannada Contemporary Version

ಇಸ್ರಾಯೇಲರ ಒಬ್ಬನೇ ರಕ್ಷಕ

1 ಈಗಲಾದರೋ ಯಾಕೋಬನ ವಂಶವೇ,

ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ,

ರೂಪಿಸಿದ ಯೆಹೋವ ದೇವರು ಹೇಳುವುದೇನೆಂದರೆ:

"ಹೆದರಬೇಡ, ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದೆನಲ್ಲಾ,

ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.

2 ನೀನು ಜಲರಾಶಿಯನ್ನು ದಾಟಿಹೋಗುವಾಗ,

ನಾನು ನಿನ್ನೊಂದಿಗಿರುವೆನು;

ನದಿಗಳನ್ನು ನೀನು ದಾಟುವಾಗ,

ಅವು ನಿನ್ನನ್ನು ಮುಳುಗಿಸುವುದಿಲ್ಲ;

ಬೆಂಕಿಯಲ್ಲಿ ನಡೆಯುವಾಗ,

ನೀನು ಸುಟ್ಟುಹೋಗುವುದಿಲ್ಲ;

ಜ್ವಾಲೆಯು ನಿನ್ನನ್ನು ದಹಿಸದು.

Em outras traduções

  1. IRVKAN Indian Revised Version (IRV) - Kannada - 2019

    1 ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ,

    "ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.

    2 ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು,

    ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.