3 ಯಾಕೋಬನ ಮನೆತನದವರೇ,
ಇಸ್ರಾಯೇಲ್ ಮನೆತನದಲ್ಲಿ ಉಳಿದಿರುವವರೇ,
ನಿಮ್ಮನ್ನು ಗರ್ಭದಲ್ಲಿ ಹೊತ್ತು,
ಹುಟ್ಟಿದಂದಿನಿಂದ ಪಾಲಿಸುತ್ತಿದ್ದಾತನ ಮಾತನ್ನು ಕೇಳಿರಿ.
4 ನಿಮ್ಮ ಮುಪ್ಪಿನ ತನಕ ನಾನೇ ಆಧಾರ;
ನೆರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು;
ನಾನೇ ಉಂಟುಮಾಡಿದೆನು; ನಾನೇ ಹೊರುವೆನು;
ಹೌದು, ನಿಮ್ಮನ್ನು ಹೊತ್ತು, ಸಹಿಸಿ, ನಿರ್ವಹಿಸುವೆನು.