Pular para o conteúdo
Publicidade

ಯೆಶಾಯ 53:1-5

OKCV Kannada Contemporary Version

1 ನಮ್ಮ ಸುದ್ದಿಯನ್ನು ಯಾರು ನಂಬಿದ್ದಾರೆ?

ಯೆಹೋವ ದೇವರ ಬಾಹುವು ಯಾರಿಗೆ ಪ್ರಕಟವಾಯಿತು?

2 ಅವನು ಚಿಗುರಿನಂತೆಯೂ, ಒಣ ನೆಲದಿಂದ ಹುಟ್ಟಿಬರುವ

ಬೇರಿನಂತೆಯೂ ಯೆಹೋವ ದೇವರ ಮುಂದೆ ಬೆಳೆಯುವನು.

ಅವನಿಗೆ ಯಾವ ಸೌಂದರ್ಯವಾಗಲಿ ಇಲ್ಲವೆ ಘನತೆಯಾಗಲಿ ಇರಲಿಲ್ಲ.

ನಾವು ಅವನನ್ನು ನೋಡಿದಾಗ, ಅವನಲ್ಲಿ ಆಕರ್ಷಿಸತಕ್ಕ ಯಾವ ಚಂದವು ಇರಲಿಲ್ಲ.

3 ಆತನು ತಿರಸ್ಕೃತನೂ ಮಾನವಕುಲದಿಂದ ನಿರಾಕರಿಸಲಾದವನೂ,

ದುಃಖಿತ ಮನುಷ್ಯನೂ, ನೋವನ್ನು ಅನುಭವಿಸಿದವನೂ ಆಗಿದ್ದನು.

ನಾವು ನಮ್ಮ ಮುಖಗಳನ್ನು ಆತನಿಂದ ಮರೆಮಾಡಿಕೊಂಡೆವು.

ಆತನು ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಆತನನ್ನು ಅತ್ಯಲ್ಪವಾಗಿ ಎಣಿಸಿದೆವು.

4 ನಿಶ್ಚಯವಾಗಿಯೂ ಆತನು ನಮ್ಮ ನೋವನ್ನು ತೆಗೆದುಕೊಂಡನು;

ಹೌದು, ನಮ್ಮ ದುಃಖಗಳನ್ನು ಸಹ ಹೊತ್ತುಕೊಂಡನು.

ಆದರೂ ನಾವು ಆತನನ್ನು ಪೆಟ್ಟು ತಿಂದವನು,

ದೇವರಿಂದ ಶಿಕ್ಷೆಹೊಂದಿದವನು, ಬಾಧೆಪಟ್ಟವನು ಎಂದು ಭಾವಿಸಿಕೊಂಡೆವು.

5 ನಮ್ಮ ಉಲ್ಲಂಘನೆಗಳಿಗಾಗಿ ಆತನು ತಿವಿತಕ್ಕೆ ಒಳಗಾದನು.

ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಿಹೋದನು.

ನಮಗೆ ಸಮಾಧಾನವನ್ನು ತಂದ ದಂಡನೆಯು ಆತನ ಮೇಲಿತ್ತು.

ಆತನ ಗಾಯಗಳಿಂದ ನಮಗೆ ಗುಣವಾಯಿತು.

Em outras traduções

  1. IRVKAN Indian Revised Version (IRV) - Kannada - 2019

    1 ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?

    2 ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು.

    ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.

    3 ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು,

    ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.

    4 ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು,

    ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.

    5 ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು;

    ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.