ಚೀಯೋನಿನ ಮಹಿಮೆ
1 ಏಳು, ಪ್ರಕಾಶಿಸು. ಏಕೆಂದರೆ ನಿನ್ನ ಮೇಲೆ ಬೆಳಕು ಬಂತು,
ಯೆಹೋವ ದೇವರ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
2 ಇಗೋ, ಕತ್ತಲೆ ಭೂಮಿಯನ್ನೂ,
ಗಾಢಾಂಧಕಾರವು ಜನರನ್ನೂ ಮುಚ್ಚುವುದು.
ಆದರೆ ನಿನ್ನ ಮೇಲೆ ಯೆಹೋವ ದೇವರು ಉದಯಿಸುವರು.
ಆತನ ಮಹಿಮೆಯು ನಿನ್ನ ಮೇಲೆ ಕಾಣಬರುವುದು.
3 ಇತರ ಜನಾಂಗಗಳು ನಿನ್ನ ಪ್ರಕಾಶಕ್ಕೂ,
ಅರಸರು ನಿನ್ನ ಉದಯದ ಕಾಂತಿಗೂ ಬರುವರು.