19 ಇನ್ನು ಮೇಲೆ ಸೂರ್ಯನು ನಿನಗೆ ಹಗಲಿನಲ್ಲಿ ಬೆಳಕಾಗಿರುವುದಿಲ್ಲ.
ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವುದಿಲ್ಲ.
ಆದರೆ ಯೆಹೋವ ದೇವರು ನಿನಗೆ ನಿತ್ಯವಾದ ಬೆಳಕಾಗಿರುವರು.
ನಿನ್ನ ದೇವರು ನಿನ್ನ ಬೆಳಗುವ ತೇಜಸ್ಸಾಗಿರುವರು.
20 ನಿನ್ನ ಸೂರ್ಯನು ಅಸ್ತಮಿಸುವುದಿಲ್ಲ.
ನಿನ್ನ ಚಂದ್ರನು ಕಾಣದೆ ಹೋಗುವುದಿಲ್ಲ.
ಏಕೆಂದರೆ ಯೆಹೋವ ದೇವರು ನಿನಗೆ
ನಿತ್ಯವಾದ ಬೆಳಕಾಗಿರುವರು. ನೀನು ದುಃಖಿಸುವ ದಿನಗಳು ಸಮಾಪ್ತಿಯಾಗುವುದು.