10 ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು.
ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು.
ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ,
ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ,
ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ.
ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.