2 ಯೆಹೋವ ದೇವರ ಮೆಚ್ಚುಗೆಯ ವರ್ಷವನ್ನು ಸಾರಿ ಹೇಳುವುದಕ್ಕೂ,
ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧ ಮಾಡುವುದಕ್ಕೂ,
ದುಃಖವುಳ್ಳವರೆಲ್ಲರನ್ನು ಆದರಿಸುವುದಕ್ಕೂ,
3 ಚೀಯೋನಿನಲ್ಲಿ ದುಃಖಿಸುವವರಿಗೆ
ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ,
ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ,
ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು
ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ.
ಆಗ ಅವರಿಗೆ ನೀತಿವೃಕ್ಷಗಳೆಂದೂ,
ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ
ನೆಟ್ಟ ಗಿಡಗಳೆಂದೂ ಹೆಸರಾಗುವುದು.