ನ್ಯಾಯತೀರ್ಪು ಮತ್ತು ನಿರೀಕ್ಷಣೆ
1 ಯೆಹೋವ ದೇವರು ಹೇಳುವುದೇನೆಂದರೆ:
"ಆಕಾಶವೇ ನನ್ನ ಸಿಂಹಾಸನ,
ಭೂಮಿಯೇ ನನ್ನ ಪಾದ ಪೀಠ,
ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ?
ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
2 ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯೇ.
ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು,"
ಎಂದು ಯೆಹೋವ ದೇವರು ಹೇಳುತ್ತಾರೆ.
"ನಾನು ಕಟಾಕ್ಷಿಸುವವನು ಎಂಥವನೆಂದರೆ:
ದೀನನೂ, ಮನಮುರಿದವನೂ,
ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.