ಪೀಠಿಕೆ
1 ಊಚ್ ದೇಶದಲ್ಲಿ ಯೋಬ ಎಂಬ ಮನುಷ್ಯನಿದ್ದನು. ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೆಟ್ಟದ್ದನ್ನು ತೊರೆಯುವವನೂ ಆಗಿದ್ದನು. 2 ಅವನಿಗೆ ಏಳುಮಂದಿ ಪುತ್ರರೂ ಮೂರು ಮಂದಿ ಪುತ್ರಿಯರೂ ಇದ್ದರು. 3 ಅವನಿಗೆ ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಐನೂರು ಕತ್ತೆಗಳು ಮತ್ತು ಅನೇಕ ಕೆಲಸಗಾರರಿದ್ದರು. ಅವನು ಪೂರ್ವದೇಶದ ಜನರೆಲ್ಲರಲ್ಲಿಯೇ ಹೆಚ್ಚು ಐಶ್ವರ್ಯವುಳ್ಳವನಾಗಿದ್ದನು.