6 ಬೆಟ್ಟಗಳ ಅಡಿಗಳ ಪರ್ಯಂತರ ಇಳಿದು ಹೋದೆನು.
ಕೆಳಗಿನ ಭೂಮಿಯು ನನ್ನನ್ನು ಶಾಶ್ವತವಾಗಿ ನಿರ್ಬಂಧಿಸಿತು.
ಆದರೂ ದೇವರಾದ ನನ್ನ ಯೆಹೋವ ದೇವರೇ,
ನೀವು ನನ್ನ ಪ್ರಾಣವನ್ನು ತಗ್ಗಿನಿಂದ ಮೇಲಕ್ಕೆ ಎಬ್ಬಿಸಿದ್ದೀರಿ.
7 "ನನ್ನ ಪ್ರಾಣವು ನನ್ನಲ್ಲಿ ಕುಂದಿ ಹೋದಾಗ,
ಯೆಹೋವ ದೇವರೇ ನಿಮ್ಮನ್ನು ಜ್ಞಾಪಕಮಾಡಿಕೊಂಡೆನು.
ನನ್ನ ಪ್ರಾರ್ಥನೆಯು ನಿಮ್ಮ ಬಳಿಗೆ
ನಿಮ್ಮ ಪರಿಶುದ್ಧ ಮಂದಿರದೊಳಗೆ ಬಂದಿತು.