6 ಯೇಸು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಯೇಸುವಿಗೆ, "ಸ್ವಾಮೀ, ನೀವು ನನ್ನ ಪಾದಗಳನ್ನು ತೊಳೆಯುತ್ತೀರೋ?" ಎಂದು ಕೇಳಿದನು.
7 ಯೇಸು ಅವನಿಗೆ, "ನಾನು ಮಾಡುವುದು ಏನೆಂದು ಈಗ ನಿನಗೆ ಅರ್ಥವಾಗುವುದಿಲ್ಲ. ಆದರೆ ಇನ್ನು ಮುಂದೆ ನಿನಗೆ ಅರ್ಥವಾಗುವುದು," ಎಂದರು.
8 ಪೇತ್ರನು ಯೇಸುವಿಗೆ, "ನೀವು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು," ಎಂದನು.
ಯೇಸು ಅವನಿಗೆ, "ನಾನು ನಿನ್ನ ಪಾದಗಳನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇಲ್ಲ," ಎಂದು ಹೇಳಿದರು.