13 ನನ್ನ ಹೆಸರಿನಲ್ಲಿ ನೀವು ಏನೇನು ಕೇಳಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ತಂದೆಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು. 14 ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಕೇಳಿಕೊಂಡರೆ ನಾನು ಅದನ್ನು ಮಾಡುವೆನು.
ಪರಿಶುದ್ಧಾತ್ಮರನ್ನು ಕುರಿತು ಯೇಸು ವಾಗ್ದಾನ ಮಾಡಿದ್ದು
15 "ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಅನುಸರಿಸುವಿರಿ. 16 ನಾನು ತಂದೆಯನ್ನು ಕೇಳಿಕೊಳ್ಳುವೆನು. ಆಗ ತಂದೆ ನಿಮಗೆ ಬೇರೊಬ್ಬ ಸಹಾಯಕರನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕೊಡುವರು.