ದ್ರಾಕ್ಷಿಯ ಬಳ್ಳಿ ಮತ್ತು ಕವಲುಬಳ್ಳಿಗಳು
1 "ನಾನೇ ನಿಜವಾದ ದ್ರಾಕ್ಷಿಯ ಬಳ್ಳಿ, ನನ್ನ ತಂದೆಯೇ ತೋಟಗಾರರು. 4 ನಾನು ನಿಮ್ಮಲ್ಲಿ ನೆಲೆಗೊಂಡಿರುವ ಹಾಗೇ ನನ್ನಲ್ಲಿ ನೆಲೆಗೊಂಡಿರಿ. ಕವಲುಬಳ್ಳಿಯು ದ್ರಾಕ್ಷಿಯ ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.
5 "ನಾನೇ ದ್ರಾಕ್ಷಿಯ ಬಳ್ಳಿ, ನೀವು ಕವಲುಬಳ್ಳಿಗಳು. ನೀವು ನನ್ನಲ್ಲಿ ಮತ್ತು ನಾನು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಬಹಳ ಫಲಕೊಡುವಿರಿ. ಏಕೆಂದರೆ ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ. 7 ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಬಯಸುವ ಯಾವುದನ್ನಾದರೂ ಬೇಡಿಕೊಳ್ಳಿರಿ. ಅದು ನಿಮ್ಮದಾಗುವುದು.
16 ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.