ದ್ರಾಕ್ಷಿಯ ಬಳ್ಳಿ ಮತ್ತು ಕವಲುಬಳ್ಳಿಗಳು
1 "ನಾನೇ ನಿಜವಾದ ದ್ರಾಕ್ಷಿಯ ಬಳ್ಳಿ, ನನ್ನ ತಂದೆಯೇ ತೋಟಗಾರರು. 2 ನನ್ನಲ್ಲಿದ್ದು ಫಲವನ್ನು ಕೊಡದ ಪ್ರತಿಯೊಂದು ಕವಲುಬಳ್ಳಿಯನ್ನು ತಂದೆ ಮೇಲಕ್ಕೆ ಎತ್ತಿಡುವರು. ಆದರೆ ಫಲಕೊಡುವ ಪ್ರತಿಯೊಂದು ಕವಲುಬಳ್ಳಿಯು ಹೆಚ್ಚು ಫಲಕೊಡುವಂತೆ ಅದನ್ನು ಕತ್ತರಿಸಿ ಶುದ್ಧ ಮಾಡುತ್ತಾರೆ. 3 ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ. 4 ನಾನು ನಿಮ್ಮಲ್ಲಿ ನೆಲೆಗೊಂಡಿರುವ ಹಾಗೇ ನನ್ನಲ್ಲಿ ನೆಲೆಗೊಂಡಿರಿ. ಕವಲುಬಳ್ಳಿಯು ದ್ರಾಕ್ಷಿಯ ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.
5 "ನಾನೇ ದ್ರಾಕ್ಷಿಯ ಬಳ್ಳಿ, ನೀವು ಕವಲುಬಳ್ಳಿಗಳು. ನೀವು ನನ್ನಲ್ಲಿ ಮತ್ತು ನಾನು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಬಹಳ ಫಲಕೊಡುವಿರಿ. ಏಕೆಂದರೆ ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.