13 ಒಬ್ಬನು ತನ್ನ ಸ್ನೇಹಿತರಿಗಾಗಿ ತನ್ನ ಪ್ರಾಣವನ್ನೇ ಕೊಡುವ ಪ್ರೀತಿಗಿಂತ ಮಹತ್ತಾದದ್ದು ಯಾರಲ್ಲೂ ಇಲ್ಲ. 14 ನಾನು ನಿಮಗೆ ಆಜ್ಞಾಪಿಸಿದ್ದನ್ನು ಪಾಲಿಸಿದರೆ ನೀವು ನನ್ನ ಸ್ನೇಹಿತರು. 15 ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ. ಏಕೆಂದರೆ ತನ್ನ ಧಣಿಯು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.