ಯೋಹಾನನು ಬರೆದ ಸುವಾರ್ತೆಯ ಉದ್ದೇಶ
30 ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ಶಿಷ್ಯರ ಮುಂದೆ ಮಾಡಿದರು. ಅವುಗಳು ಈ ಪುಸ್ತಕದಲ್ಲಿ ಬರೆದಿಲ್ಲ. 31 ಆದರೆ ಯೇಸುವೇ ದೇವಪುತ್ರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಅವರ ಹೆಸರಿನ ಮೂಲಕ ನಿತ್ಯಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲಾಗಿದೆ.