19 ಆ ತೀರ್ಪು ಏನೆಂದರೆ: ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು. 20 ಕೇಡನ್ನು ಮಾಡುವವರು ಬೆಳಕನ್ನು ದ್ವೇಷಿಸುತ್ತಾರೆ ಮತ್ತು ಬೆಳಕಿಗೆ ಬರುವುದಿಲ್ಲ. ಏಕೆಂದರೆ ಅವರು ಮಾಡಿರುವ ಕೆಟ್ಟ ಕಾರ್ಯಗಳನ್ನೆಲ್ಲಾ ಬೆಳಕು ತೋರಿಸುತ್ತದೆ. 21 ಆದರೆ ಸತ್ಯವನ್ನು ಅನುಸರಿಸುವವರು ನಡೆದಿರುವ ತಮ್ಮ ಕೃತ್ಯಗಳು ದೇವರಿಂದ ಆದವುಗಳೆಂದು ಪ್ರಕಟಿಸುವಂತೆ ಬೆಳಕಿಗೆ ಬರುತ್ತಾರೆ.
Publicidade