3 ಯೇಸು ಅವನಿಗೆ, "ಒಬ್ಬನು ಮತ್ತೊಮ್ಮೆ ಹುಟ್ಟದಿದ್ದರೆ3:3 ಗ್ರೀಕ್ ಭಾಷೆಯಲ್ಲಿ ಮೇಲಿನಿಂದ ಎಂದಿದೆ. ಅವನು ದೇವರ ರಾಜ್ಯವನ್ನು ಕಾಣಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ."
4 ನಿಕೊದೇಮನು ಯೇಸುವಿಗೆ, "ಒಬ್ಬನು ವಯಸ್ಸಾದ ಮೇಲೆ ಮತ್ತೆ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಾದೀತೇ?" ಎಂದು ಕೇಳಿದನು.
5 ಯೇಸು ಅವನಿಗೆ, "ಯಾರು ನೀರಿನಿಂದಲೂ ಆತ್ಮದಿಂದಲೂ ಹುಟ್ಟುವದಿಲ್ಲವೋ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.