21 ತಂದೆ ಸತ್ತವರನ್ನು ಎಬ್ಬಿಸಿ ಬದುಕಿಸುವಂತೆಯೇ ಪುತ್ರನೂ ತನಗಿಷ್ಟ ಬಂದವರನ್ನು ಬದುಕಿಸುತ್ತಾರೆ. 22 ತಂದೆ ಯಾರಿಗೂ ತೀರ್ಪು ಮಾಡುವುದಿಲ್ಲ. ಆದರೆ ತೀರ್ಪು ಮಾಡುವುದನ್ನೆಲ್ಲಾ ಪುತ್ರನಿಗೆ ಒಪ್ಪಿಸಿದ್ದಾರೆ. 23 ಎಲ್ಲರೂ ತಂದೆಯನ್ನು ಸನ್ಮಾನಿಸುವಂತೆಯೇ ಪುತ್ರನನ್ನೂ ಸನ್ಮಾನಿಸಬೇಕು. ಪುತ್ರನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿದ ತಂದೆಯನ್ನೂ ಸನ್ಮಾನಿಸುವುದಿಲ್ಲ.
Publicidade