53 ಯೇಸು ಅವರಿಗೆ, "ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಪುತ್ರನಾದ ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ಜೀವವಿರುವುದಿಲ್ಲ. 54 ಯಾರು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾರೋ ಅವರು ನಿತ್ಯಜೀವವನ್ನು ಹೊಂದಿದ್ದಾರೆ, ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು.