57 ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿದ್ದಾರೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುವಂತೆಯೇ ನನ್ನನ್ನು ತಿನ್ನುವವರು ನನ್ನ ನಿಮಿತ್ತವಾಗಿಯೇ ಜೀವಿಸುವರು. 58 ಪರಲೋಕದಿಂದ ಬಂದ ರೊಟ್ಟಿಯು ಇದೇ. ನಿಮ್ಮ ಪಿತೃಗಳು ‘ಮನ್ನಾ’ ತಿಂದರೂ ಸತ್ತರು. ಇದು ಹಾಗಲ್ಲ, ಈ ರೊಟ್ಟಿಯನ್ನು ತಿನ್ನುವವರು ಸದಾಕಾಲಕ್ಕೂ ಜೀವಿಸುವರು," ಎಂದರು.