4 ಅವರು ಯೇಸುವಿಗೆ, "ಬೋಧಕರೇ, ಈ ಸ್ತ್ರೀ ವ್ಯಭಿಚಾರ ಮಾಡುವಾಗಲೇ ಸಿಕ್ಕಿಬಿದ್ದಳು. 5 ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯು ನಿಯಮದಲ್ಲಿ ನಮಗೆ ಆಜ್ಞಾಪಿಸಿದ್ದಾನೆ. ಆದ್ದರಿಂದ ನೀವು ಏನು ಹೇಳುತ್ತೀರಿ?" ಎಂದು ಕೇಳಿದರು. 6 ಅವರು ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿ ತಪ್ಪು ಹೊರಿಸಬೇಕೆಂದೇ ಹೀಗೆ ಕೇಳಿದರು.
ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದರು. 7 ಅವರು ಬಿಡದೆ ಪ್ರಶ್ನೆಗಳನ್ನು ಕೇಳುತ್ತಿರಲು ಯೇಸು ನೆಟ್ಟಗೆ ಕುಳಿತುಕೊಂಡು, "ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಇವಳ ಮೇಲೆ ಕಲ್ಲು ಎಸೆಯಲಿ," ಎಂದು ಅವರಿಗೆ ಹೇಳಿದರು. 8 ತಿರುಗಿ ಯೇಸು ಬಗ್ಗಿಕೊಂಡು ನೆಲದ ಮೇಲೆ ಬರೆಯತೊಡಗಿದರು.
9 ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಕಿರಿಯರವರೆಗೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬರೇ ಉಳಿದರು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು. 10 ಯೇಸು ನೆಟ್ಟಗೆ ಕುಳಿತುಕೊಂಡು ಆಕೆಗೆ, "ಅಮ್ಮಾ ಅವರು ಎಲ್ಲಿದ್ದಾರೆ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೋ?" ಎಂದರು.
11 ಅದಕ್ಕೆ ಆಕೆಯು, "ಸ್ವಾಮಿ, ಯಾರೂ ಶಿಕ್ಷೆ ವಿಧಿಸಲಿಲ್ಲ," ಎಂದಳು.
ಯೇಸು ಆಕೆಗೆ, "ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪ ಮಾಡಬೇಡ," ಎಂದರು. 8:11 ಕೆಲವು ಮೂಲ ಪ್ರತಿಗಳಲ್ಲಿ ಯೋಹಾನ 7:53–8:11 ವಾಕ್ಯ ಸೇರ್ಪಡೆಯಾಗಿರುವುದಿಲ್ಲ.