5 ನೀನು ಜೀವಿಸುವ ದಿವಸಗಳಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಮರೆಯುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ. 6 ಬಲಿಷ್ಠನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರಿಗೆ ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ.