10 "ಈಗ ಯೆಹೋವ ದೇವರು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲರು ಮರುಭೂಮಿಯಲ್ಲಿ ಸಂಚರಿಸಿದ ನಾಲ್ವತ್ತೈದು ವರ್ಷ ಯೆಹೋವ ದೇವರು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾರೆ. ಈಗ ನಾನು ಇಂದು ಎಂಬತ್ತೈದು ವರ್ಷ ಪ್ರಾಯದವನಾಗಿದ್ದೇನೆ. 11 ಮೋಶೆ ನನ್ನನ್ನು ಕಳುಹಿಸಿದ ದಿವಸದಲ್ಲಿ ನಾನು ಹೇಗೆ ಬಲಿಷ್ಠನಾಗಿ ಇದ್ದೆನೋ, ಹಾಗೆಯೇ ಈಗಲೂ ಬಲಿಷ್ಠನಾಗಿದ್ದೇನೆ. ನಾನು ಯುದ್ಧ ಮಾಡುವದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವದಕ್ಕೂ ನನಗೆ ಆಗ ಇದ್ದ ಶಕ್ತಿಯ ಹಾಗೆಯೇ ಈಗಲೂ ಶಕ್ತಿಯುಳ್ಳವನಾಗಿದ್ದೇನೆ.
Publicidade